| |

67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ

ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರು ಸೋಮವಾರ (22-03-2021) 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಘೋಷಣೆ ಮಾಡಿದ್ದಾರೆ. ಇನ್ನು ಈ ಬಾರಿ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಮಣಿಕರ್ಣಿಕಾ ಸಿನಿಮಾಕ್ಕಾಗಿ ನಟಿ ಕಂಗನಾ ರನೌತ್​ ಪಡೆದಿದ್ದಾರೆ. ಧನುಷ್, ಮನೋಜ್ ಬಾಜ್ಪೇಯಿ ಅತ್ಯುತ್ತಮ ನಟ ಪ್ರಶಸ್ತಿ ಪಡೆದಿದ್ದಾರೆ. ಅತ್ಯುತ್ತಮ ಹಿಂದಿ ಚಿತ್ರ ಸುಶಾಂತ್​ ಸಿಂಗ್​ ರಜಪೂತ್​ ಅವರ ಚಿಂಚೋರೆ ಚಿತ್ರ ಪಡೆದಿದೆ.

ಪ್ರತಿ ವರ್ಷ ಮೇ 3 ರಂದು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭವನ್ನು ನಡೆಸಲಾಗುತ್ತದೆ. ಆದರೆ, ಕಳೆದ ವರ್ಷ ಜಾಗತಿಕ ಸೋಂಕಿನ ಹಿನ್ನಲೆ ಈ ಪ್ರಶಸ್ತಿಯನ್ನು ಮುಂದೂಡಲಾಗಿತ್ತು. ಈ ಬಾರಿ ಪ್ರಶಸ್ತಿ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ರಾಷ್ಟ್ರ ಪ್ರಶಸ್ತಿ ವಿಭಾಗಕ್ಕೆ ಕನ್ನಡದಿಂದ ಅನೇಕ ಸಿನಿಮಾಗಳು ನಾಮ ನಿರ್ದೇಶನವಾಗಿದ್ದವು. ಅವುಗಳಲ್ಲಿ ಬೆರಳೆಣಿಕೆಯಷ್ಟು ಸಿನಿಮಾಕ್ಕೆ ಪ್ರಶಸ್ತಿಗಳು ಸಿಕ್ಕಿವೆ. ‘ಸಿಂಪಲ್ ಸ್ಟಾರ್’ ರಕ್ಷಿತ್ ಶೆಟ್ಟಿ, ಶಾನ್ವಿ ಶ್ರೀವಾಸ್ತವ ಅಭಿನಯದ ‘ಅವನೇ ಶ್ರೀಮನ್ನಾರಾಯಣ’ ಹಾಗೂ ‘ಅಕ್ಷಿ’ ಸಿನಿಮಾಕ್ಕೆ ಪ್ರಶಸ್ತಿ ಸಿಕ್ಕಿದೆ. ‘ಶ್ರೀಮನ್ನಾರಾಯಣ’ ಸಿನಿಮಾದ ಸಾಹಸ ನಿರ್ದೇಶನಕ್ಕೆ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ. ಅತ್ಯುತ್ತಮ ಕನ್ನಡ ಸಿನಿಮಾ ವಿಭಾಗದ ಪ್ರಶಸ್ತಿಯು ‘ಅಕ್ಷಿ’ ಚಿತ್ರಕ್ಕೆ ಸೇರಿದೆ. ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಗೋವಿಂದೇ ಗೌಡ್ರು ಈ ಚಿತ್ರದಲ್ಲಿ ನಟಿಸಿದ್ದರು.

# ಪ್ರಶಸ್ತಿ ಪಟ್ಟಿ :
* ಅತ್ಯುತ್ತಮ ಚಿತ್ರ : ಮರಕ್ಕರ್​- ಅರಬಿಕಾಡಾಲಿಂಟೆ-ಸಿಂಹಂ
* ಅತ್ಯುತ್ತಮ ನಟ: ಅಸುರನ್​ ಸಿನಿಮಾಗಾಗಿ ಧನುಷ್​, ಭೋನ್ಸಲೆ ಚಿತ್ರಕ್ಕಾಗಿ ಮನೋಜ್​ ಬಾಜ್ಪೇಜಿ
* ಅತ್ಯುತ್ತಮ ನಟಿ: ಪಂಕಾ ಮತ್ತು ಮಣಿಕರ್ಣಿಕಾ ಚಿತ್ರಕ್ಕಾಗಿ ನಟಿ ಕಂಗನಾ ರನೌತ್​
* ಅತ್ಯುತ್ತಮ ಸಹಾಯಕ ನಟ: ಸೂಪರ್​ ಡಿಲಕ್ಸ್​ ಚಿತ್ರಕ್ಕಾಗಿ ನಟ ವಿಜಯ್​ ಸೇತುಪತಿ
* ಅತ್ಯುತ್ತಮ ಸಹಾಯಕ ನಟಿ: ದಿ ತಷ್ಕೆಂಟ್​ ಫೈಲ್ಸ್​ ಗಾಗಿ ನಟಿ ಪಲ್ಲವಿ ಜೋಷಿಅತ್ಯುತ್ತಮ ನಿರ್ದೇಶಕ: ಬಹಟ್ಟರ್​ ಹುರೈನ್​ * ಚಿತ್ರಕ್ಕಾಗಿ ಸಂಜಯ್​ ಪುರಾನ್ ಸಿಂಗ್​ ಚೌಹನ್

* ಅತ್ಯುತ್ತಮ ಕನ್ನಡ ಚಿತ್ರ : ಅಕ್ಷಿ
* ಅತ್ಯುತ್ತಮ ಹಿಂದಿ ಚಿತ್ರ : ಚಿಚೋರೆ
* ಅತ್ಯುತ್ತಮ ಬೆಂಗಾಲಿ ಚಿತ್ರ: ಗುಮ್ನಾಮಿ
* ಅತ್ಯುತ್ತಮ ತುಳು ಚಿತ್ರ: ಪಿಂಗಾರ
* ಅತ್ಯುತ್ತಮ ತೆಲುಗು ಚಿತ್ರ: ಜೆರ್ಸಿ
* ಅತ್ಯುತ್ತಮ ತಮಿಳು ಚಿತ್ರ: ಅಸುರನ್​
* ಅತ್ಯುತ್ತಮ ಮಲಯಾಳಂ ಚಿತ್ರ: ಸಕಲ್ಲ ನೊಟ್ಟಂ

*  ಅತ್ಯುತ್ತಮ ಸಾಹಸ ನಿರ್ದೇಶನ ಅವನ್ನೇ ಶ್ರೀಮನ್ನಾರಾಯಣ
* ಅತ್ಯುತ್ತಮ ಸಾಹಸ ನಿರ್ದೇಶನ ತೆಲುಗು: ಮಹರ್ಷಿ
* ಅತ್ಯುತ್ತಮ ನಿರ್ದೇಶಕ : ತಮಿಳಿನ ವೆಟ್ರಿಮಾರನ್ ಚಿತ್ರದ ನಿರ್ದೇಶಕ ಅಸುರನ್
* ಅತ್ಯತ್ತಮ ಸಾಮಾಜಿಕ ಕಳಕಳಿ ಚಿತ್ರ: ಆನಂದಿ ಗೋಪಾಲ್​
* ಅತ್ಯುತ್ತಮ ಸಂಗೀತ ನಿರ್ದೇಶ: ವಿಶ್ವಾಸಂ ಚಿತ್ರಕ್ಕಾಗಿ ಡಿ ಇಮಾನ್​
* ನಾನ್​ ಫೀಚರ್​ ಫಿಲ್ಮ್​ ವಿಭಾಗದಲ್ಲಿ ಅತ್ಯುತ್ತಮ ನಿರೂಪಣೆಗಾಗಿ ಸರ್​ ಡೇವಿಡ್​ ಅಟೆನ್​ಬರೋ​ ಅವರ ವೈಲ್ಡ್​ ಕರ್ನಾಟಕ ಚಿತ್ರ ಪ್ರಶಸ್ತಿ ಪಡೆದಿದೆ.

# ಪ್ರಶಸ್ತಿಗಳು :
# ಭಾರತ ರತ್ನ ಪ್ರಶಸ್ತಿ ಪುರಸ್ಕೃತರ ಪಟ್ಟಿ
# ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಪಟ್ಟಿ
# ಪಂಪ ಪ್ರಶಸ್ತಿ ಪುರಸ್ಕೃತರ ಪಟ್ಟಿ
# ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡಿಗರ ಪಟ್ಟಿ
# ನೊಬೆಲ್ ಪ್ರಶಸ್ತಿ
# ಪ್ರಮುಖ ಅಂತರಾಷ್ಟ್ರೀಯ ಪ್ರಶಸ್ತಿಗಳು
# ಆಸ್ಕರ್ ಪ್ರಶಸ್ತಿಗಳನ್ನು ನೀಡುವ ಸಂಸ್ಥೆ ಯಾವುದು..? ಅದರ ಹಿನ್ನೆಲೆ ಏನು..?
# ಪ್ರಮುಖ ಪ್ರಶಸ್ತಿಗಳು ಮತ್ತು ಅವುಗಳನ್ನು ನೀಡುವ ಕ್ಷೇತ್ರಗಳು

 

Similar Posts