ಭಾರತದ ಮೊದಲ ಮಹಿಳಾ ಫ್ಲೈಟ್ ಟೆಸ್ಟ್ ಇಂಜಿನಿಯರ್ ಆಶ್ರಿತಾ

ಭಾರತದ ಮೊದಲ ಮಹಿಳಾ ಫ್ಲೈಟ್ ಟೆಸ್ಟ್ ಇಂಜಿನಿಯರ್ ಆಶ್ರಿತಾ

ಚಾಮರಾಜನಗರದ ಕೊಳ್ಳೇಗಾಲ ಮೂಲದ ಆಶ್ರಿತಾ ವಿ. ಒಲೆಟೆ ಭಾರತದ ಮೊದಲ ಮಹಿಳಾ ಫ್ಲೈಟ್ ಟೆಸ್ಟ್ ಇಂಜಿನಿಯರ್ ಆಗಿ ಆಯ್ಕೆಯಾಗಿದ್ದಾರೆ. ಭಾರತದ ಏರ್ ಫೋರ್ಸ್ ಟೆಸ್ಟ್ ಪೈಲಟ್ ಸ್ಕೂಲ್‌ನಿಂದ ಪದವಿ ಪಡೆದಿರುವ ಆಶ್ರಿತಾ ಈ ಕಠಿಣ ತರಬೇತಿ ಮುಗಿಸಿದ ಭಾರತೀಯ ವಾಯುದಳದ ಮೊಟ್ಟ ಮೊದಲ ಮಹಿಳಾ ಅಧಿಕಾರಿ ಎನಿಸಿದ್ದಾರೆ. ಆಶ್ರಿತಾ 2014ರಲ್ಲಿ ವಾಯುಪಡೆಯ ಟೆಕ್ನಿಕಲ್ ವಿಭಾಗಕ್ಕೆ ಆಯ್ಕೆಯಾಗಿದ್ದರು.

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದ ಆಶ್ರಿತಾ ವಿ ಒಲೆಟಿ ಇಡೀ ಪ್ರಪಂಚದಲ್ಲಿರುವ ಏಳು ವಿಶ್ವವಿದ್ಯಾಲಯಗಳ ಪೈಕಿ ಒಂದಾಗಿರುವ ಭಾರತದ ಪ್ರತಿಷ್ಠಿತ ಏರ್‌ಫೋರ್ಸ್ ಟೆಸ್ಟ್ ಪೈಲಟ್ ಸ್ಕೂಲ್‌ನಿಂದ ಪದವಿಯನ್ನು ಪಡೆದುಕೊಂಡಿದ್ದಾರೆ.

1976ರಲ್ಲಿ ಸ್ಥಾಪನೆಯಾದಾಗಿನಿಂದ ಈವರೆಗೆ ಕೇವಲ 275 ಪದವೀಧರರು ಮಾತ್ರ ಈ ಕೋರ್ಸ್ ಅನ್ನು ಪೂರ್ಣಗೊಳಿಸಿದ್ದು, ಆಶ್ರಿತಾ ಒಲೆಟಿ ಅತ್ಯಂತ ಕಠಿಣ ತರಬೇತಿಗಳನ್ನು ಒಳಗೊಂಡಿರುವ ಈ ಕೋರ್ಸ್ ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.

ವಾಯುಸೇನೆಯ ಮೊದಲ ಮಹಿಳಾ ಫ್ಲೈಟ್ ಟೆಸ್ಟ್ ಎಂಜಿನಿಯರ್ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದು, ಈ ಮೂಲಕ ಭಾರತೀಯ ವಾಯುದಳದ ಮೊಟ್ಟ ಮೊದಲ ಮಹಿಳಾ ಅಧಿಕಾರಿಯಾಗಿ ಕರ್ನಾಟಕದ ಆಶ್ರಿತಾ ಒಲೆಟಿ ಆಯ್ಕೆಯಾಗಿದ್ದಾರೆ.

ಫ್ಲೈಟ್ ಟೆಸ್ಟ್ ಇಂಜಿನಿಯರ್‌ಗಳು ಹೊಸ ವಿಮಾನಗಳ ವ್ಯವಸ್ಥೆಯನ್ನು ಮೌಲ್ಯಮಾಪನ ಮಾಡಲಿದ್ದು, ವಿಮಾನಗಳ ಸೇವೆಯಲ್ಲಿ ಇವರು ನಿರ್ಣಾಯಕ ಪಾತ್ರ ವಹಿಸಲಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ಪದವಿ ಪ್ರದಾನ ಸಮಾರಂಭ ಮುಗಿದಿದ್ದು, ವಾಯುಸೇನೆಯ ಅಧಿಕೃತವಾಗಿ ಮೊದಲ ಮಹಿಳಾ ಫ್ಲೈಟ್ ಟೆಸ್ಟ್ ಇಂಜಿನಿಯರ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.