✦ ರಾಜ್ಯಸಭೆ ಭಾರತದ ಶಾಸಕಾಂಗ ವ್ಯವಸ್ಥೆಯ ಮೇಲ್ಮನೆ.
✦ ಈ ಸದನದ ಒಟ್ಟು ಸದಸ್ಯರ ಸಂಖ್ಯೆ 250 , ಅದರಲ್ಲಿ 12 ಜನರನ್ನು ಭಾರತದ ಅಧ್ಯಕ್ಷರು ನಾಮಕರಣ ಮಾಡುತ್ತಾರೆ. ಈ 12 ಜನರನ್ನು ವಿವಿಧ ಕ್ಷೇತ್ರಗಳಲ್ಲಿ(ಕಲೆ, ಸಾಹಿತ್ಯ, ಕ್ರೀಡೆ, ಪತ್ರಿಕೋದ್ಯಮ, ಸಮಾಜ ಸೇವೆ, ಸಲ್ಲಿಸಿರುವ ಸೇವೆಯನ್ನು ಗುರುತಿಸಿ, ಅವರನ್ನು ರಾಜ್ಯಸಭೆಯ ಸದಸ್ಯರನ್ನಾಗಿ ನಾಮಕರಣ ಮಾಡಲಾಗುತ್ತದೆ. ಇವರನ್ನು ನಾಮಕರಣ ಸದಸ್ಯರೆಂದು ಕರೆಯಲಾಗುತ್ತದೆ. ಇನ್ನುಳಿದ ಸದಸ್ಯರನ್ನು ರಾಜ್ಯ ವಿಧಾನಸಭೆಗಳಿಂದ ಆಯ್ಕೆ ಮಾಡಲಾಗುತ್ತದೆ.
✦ ರಾಜ್ಯ ಸಭೆಯ ಸದಸ್ಯರ ಅವಧಿ 6 ವರ್ಷ. ಇದರಲ್ಲಿ ರಾಜ್ಯಸಭೆಯ 1/3 ರಷ್ಟು ಸದಸ್ಯರು 2 ವರ್ಷಗಳಿಗೊಮ್ಮೆ ನಿವೃತ್ತಿ ಹೊಂದುತ್ತಾರೆ.
✦ ರಾಜ್ಯಸಭೆಯು ಸತತವಾಗಿ ಸೇರುವ ಸದನವಾಗಿದ್ದು, ಲೋಕಸಭೆಯ ಹಾಗೇ ಇದರ ಸೇವಾವಧಿಯು ಅನೂರ್ಜಿತವಾಗುವುದಿಲ್ಲ.
✦ ರಾಜ್ಯಸಭೆಯು ಲೋಕಸಭೆಯ ಹಾಗೆಯೇ ಸಮನಾದ ಅಧಿಕಾರವನ್ನು ಹೊಂದಿರುತ್ತದೆ, ಕೆಲವು ವಿಷಯಗಳಲ್ಲಿ ಲೋಕಸಭೆ ರಾಜ್ಯಸಭೆಯ ನಿರ್ಣಯವನ್ನು ತಿರಸ್ಕರಿಸಬಹುದು. ಕೆಲವು ವಿಷಯಗಳು ಇತ್ಯರ್ಥವಾಗದ ಪಕ್ಷದಲ್ಲಿ ಜಂಟಿ ಸದನಗಳ ಬೈಠಕ್ ಕರೆಯಲಾಗುತ್ತದೆ.
✦ ಭಾರತದ ಉಪಾಧ್ಯಕ್ಷರು ರಾಜ್ಯಸಭೆಯ ಸಭಾಧ್ಯಕ್ಷರು ಆಗಿರುತ್ತಾರೆ.
✦ ಪ್ರಸ್ತುತ ಎಂ.ವೆಂಕಯ್ಯ ನಾಯ್ಡು ರಾಜ್ಯಸಭೆಯ ಅಧ್ಯಕ್ಷರು.( ಆಗಸ್ಟ್ 11, 2017)
✦ ಉಪಸಭಾಧ್ಯಕ್ಷರನ್ನು ಚುನಾವಣೆಯ ಮೂಲಕ ಭಾರತದ ಸಂಸತ್ ನ ಲೋಕಸಭೆ ಹಾಗೂ ರಾಜ್ಯಸಭೆಯ ಸದಸ್ಯರು ಆರಿಸುತ್ತಾರೆ.
✦ ಪ್ರಸ್ತುತ ಉಪಾಧ್ಯಕ್ಷರು -ಹರಿವಂಶ್ ನಾರಾಯಣ್ ಸಿಂಗ್( 9 ಅಗಸ್ಟ್, 2018)
✦ ಮೇ 13 1952ರಂದು ರಾಜ್ಯಸಭೆಯ ಮೊದಲ ಅಧಿವೇಶನವು ನಡೆಯಿತು.
✦ ರಾಜ್ಯಸಭೆ ಸದಸ್ಯರಾಗಲು ಬೇಕಾಗುವ ಅರ್ಹತೆ
1.ಭಾರತದ ಪ್ರಜೆಯಾಗಿರಬೇಕು
2.30 ವರ್ಷ ವಯೋಮಿತಿ ಹೊಂದಿರಬೇಕು
3.ನ್ಯಾಯಾಂಗದ ಶಿಕ್ಷೆಗೆ ಒಳಗಾಗಿರಬಾರದು
4.ಮತಿಭ್ರಮಣೆಯುಳ್ಳವರಾಗಿರಬಾರದು
5.ಸಂಸತ್ತು ಆಗಿಂದಾಗ್ಗೆ ನಿಗದಿಪಡಿಸಿದ ಅರ್ಹತೆ ಪಡೆದಿರಬೇಕು.