ಟಿಇಟಿ-2019 ಪರೀಕ್ಷೆಯ ಪರಿಷ್ಕೃತ ಉತ್ತರಗಳು ಪ್ರಕಟ

ಟಿಇಟಿ-2019 ಪರೀಕ್ಷೆಯ ಪರಿಷ್ಕೃತ ಉತ್ತರಗಳು ಪ್ರಕಟ

ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2019 ರ ಪರೀಕ್ಷೆಯ ಪರಿಷ್ಕೃತ ಸರಿ ಉತ್ತರಗಳನ್ನು ಪ್ರಕಟಿಸಿದೆ. ದಿನಾಂಕ 04-10-2020 ರ ಭಾನುವಾರದಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಸಲಾಗಿತ್ತು. ಪತ್ರಿಕೆ-1 ಮತ್ತು ಪತ್ರಿಕೆ-2 ರ ಪ್ರಶ್ನೆಪತ್ರಿಕೆಗಳ ಕೀ ಉತ್ತರಗಳನ್ನು ದಿನಾಂಕ 12-10-2020 ರಂದು ಇಲಾಖಾ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿತ್ತು.

ಸದರಿ ಕೀ-ಉತ್ತರಗಳಿಗೆ ಅಭ್ಯರ್ಥಿಗಳಿಗೆ ಆಕ್ಷೇಪಣೆಗಳನ್ನು ಆನ್‌ಲೈನ್‌ ಮೂಲಕ ಸಲ್ಲಿಸಲು ದಿನಾಂಕ 12-10-2020 ರಿಂದ 21-10-2020 ರವರೆಗೆ ಅವಕಾಶ ನೀಡಲಾಗಿತ್ತು. ಅಭ್ಯರ್ಥಿಗಳಿಂದ ಸ್ವೀಕರಿಸಲಾದ ಆಕ್ಷೇಪಣೆಗಳನ್ನು ವಿಷಯ ಪರಿಣಿತರಿಂದ ಪರಿಶೀಲಿಸಿ, ಪರಿಗಣಿಸಬಹುದಾದ ಆಕ್ಷೇಪಣೆಗಳನ್ನು ಪರಿಗಣಿಸಿ, ಪ್ರಸ್ತುತ ಪರಿಷ್ಕೃತ ಕೀ-ಉತ್ತರಗಳನ್ನು ವೆಬ್‌ಸೈಟ್‌ www.schooleducation.kar.nic.in ನಲ್ಲಿ ಪ್ರಕಟಿಸಲಾಗಿದೆ. KARTET ಪರಿಷ್ಕೃತ ಕೀ ಉತ್ತರಗಳನ್ನು ಚೆಕ್‌ ಮಾಡಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಥವಾ ಈ ಕೆಳಗಿನ ಡೈರೆಕ್ಟ್‌ ಲಿಂಕ್‌ ಅನ್ನು ಕ್ಲಿಕ್ ಮಾಡಿರಿ.

# ಪೇಪರ್-1

# ಪೇಪರ್-2

# ಪೇಪರ್ -2 : ಭಾಗ -3 ಮತ್ತು IV – ಮಕ್ಕಳ ಅಭಿವೃದ್ಧಿ ಮತ್ತು ಶಿಕ್ಷಣಶಾಸ್ತ್ರ, ಸಾಮಾಜಿಕ ವಿಜ್ಞಾನ

 

Comments

No comments yet. Why don’t you start the discussion?

Leave a Reply

Your email address will not be published. Required fields are marked *