Latest Updates

ಎಫ್‌ಡಿಎ ಪರೀಕ್ಷೆ ದಿಢೀರ್ ಮುಂದೂಡಿಕೆ..!

ಬೆಂಗಳೂರು : ನಾಳೆ (ಜ.24) ರಂದು ನಿಗದಿಯಾಗಿದ್ದ ‘ಎಫ್ ಡಿ ಎ’ ( ಪ್ರಥಮ ದರ್ಜೆ ಸಹಾಯಕ) ಪರೀಕ್ಷೆ ಮುಂದೂಡಲಾಗಿದೆ. ಕರ್ನಾಟಕ ಲೋಕಸೇವಾ ಆಯೋಗದ ಅಧಿಸೂಚನೆ ಅನ್ವಯ ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನಾಳೆ ನಡೆಯಬೇಕಿದ್ದ ಪರೀಕ್ಷೆಯನ್ನು ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ದಿಢೀರ್ ಮುಂದೂಡಲಾಗಿದೆ. ನಾಳೆ ನಡೆಯಬೇಕಿದ್ದ ಎಫ್ ಡಿ ಎ ಪರೀಕ್ಷೆ ಮುಂದೂಡಲಾಗಿದೆ ಎಂದು ಕಾರ್ಯದರ್ಶಿ ಜಿ. ಸತ್ಯವತಿ ಮಾಹಿತಿ ನೀಡಿದ್ದಾರೆ.

ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಕೆಲವೊಂದು ದುಷ್ಕರ್ಮಿಗಳ ಕೈ ಸೇರಿರುವುದು ತಿಳಿದು ಬಂದಿರುವ ಹಿನ್ನೆಲೆಯಲ್ಲಿ ಜನವರಿ 24 ರಂದು ನಡೆಯಬೇಕಿದ್ದ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ. ದಿನಾಂಕವನ್ನು ಮರು ನಿಗದಿಪಡಿಸಿ ಪ್ರಕಟಿಸಲಾಗುವುದು ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಜಿ. ಸತ್ಯವತಿ ತಿಳಿಸಿದ್ದಾರೆ.

ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಈಗಾಗಲೇ 6 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

error: Content is protected !!