ವಿಶೇಷ ರಿಸರ್ವ್‌ ಪೊಲೀಸ್ ಕಾನ್ಸ್‌ಟೇಬಲ್‌ ಪರೀಕ್ಷೆಯ ಕೀ ಉತ್ತರಗಳು ಪ್ರಕಟ

ವಿಶೇಷ ರಿಸರ್ವ್‌ ಪೊಲೀಸ್ ಕಾನ್ಸ್‌ಟೇಬಲ್‌ ಪರೀಕ್ಷೆಯ ಕೀ ಉತ್ತರಗಳು ಪ್ರಕಟ

ಕರ್ನಾಟಕ ಪೊಲೀಸ್ ಇಲಾಖೆಯು ವಿಶೇಷ ರಿಸರ್ವ್‌ ಪೊಲೀಸ್‌ ಕಾನ್ಸ್‌ಟೇಬಲ್ (ಕೆ.ಎಸ್‌.ಆರ್‌ಪಿ / ಐ.ಆರ್‌.ಬಿ) (ಪುರುಷ ಮತ್ತು ಮಹಿಳಾ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಲಿಖಿತ ಪರೀಕ್ಷೆಯ ತಾತ್ಕಾಲಿಕ ಸರಿ ಉತ್ತರಗಳನ್ನು ಪ್ರಕಟಿಸಿದೆ.

ಇಲಾಖೆಯು ನವೆಂಬರ್ 22, 2020 ರಂದು ಸದರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯ ಲಿಖಿತ ಪರೀಕ್ಷೆ ನಡೆಸಿತ್ತು. ಒಟ್ಟು 2420 ವಿಶೇಷ ರಿಸರ್ವ್‌ ಪೊಲೀಸ್‌ ಕಾನ್ಸ್‌ಟೇಬಲ್ (ಕೆಎಸ್‌ಆರ್‌ಪಿ / ಐಆರ್‌ಬಿ) (ಪುರುಷ ಮತ್ತು ಮಹಿಳಾ) ಹುದ್ದೆಗಳ ನೇಮಕಾತಿಗೆ ಮೇ ತಿಂಗಳಲ್ಲಿ ಅಧಿಸೂಚನೆ ಹೊರಡಿಸಿತ್ತು.

ಕೆಎಸ್‌ಪಿ ಪ್ರಸ್ತುತ ಪ್ರಕಟಿಸಿರುವ ತಾತ್ಕಾಲಿಕ ಸರಿಯುತ್ತರಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಡಿಸೆಂಬರ್ 11, 2020 ರವರೆಗೆ ಅವಕಾಶ ನೀಡಲಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಲಿಖಿತ ಪರೀಕ್ಷೆ ಬರೆದ ಅಭ್ಯರ್ಥಿಗಳು ಕೆಎಸ್‌ಪಿ ಅಧಿಕೃತ ವೆಬ್‌ಸೈಟ್‌ಗೆ ( http://srpc20.ksp-online.in/ ) ಭೇಟಿ ನೀಡಿ ಸರಿಯುತ್ತರಗಳನ್ನು ಚೆಕ್‌ ಮಾಡಬಹುದು. ಅಥವಾ ಈ ಕೆಳಗೆ ನೀಡಿರುವ ಕೀ ಉತ್ತರಗಳೊಂದಿಗೆ ತಾಳೆಹಾಕಿಕೊಳ್ಳಬಹುದು.

 

 

 

Comments

No comments yet. Why don’t you start the discussion?

Leave a Reply

Your email address will not be published. Required fields are marked *